ಜನರಲ್ಲಿ ಉಳಿತಾಯ ಮನೋಭಾವನೆಯನ್ನು ಬೆಳೆಸುವುದು, ಸದಸ್ಯರ ಆರ್ಥಿಕ ಅಭಿವೃದ್ಧಿಗೆ ವಿವಿಧ ರೀತಿಯ ಸಾಲಗಳನ್ನು ನೀಡುವುದರ ಜತೆಗೆ, ಶಿಕ್ಷಣ ಸಂಸ್ಥೆಗಳ ಸ್ಥಾಪನೆ, ತರಬೇತಿ ಕೇಂದ್ರಗಳು, ಪ್ರವಾಸೋದ್ಯಮ, ಅಭಿವೃದ್ಧಿ, ಸರಕಾರಿ ಕಾರ್ಯಕ್ರಮಗಳನ್ನು ಸ್ವಯಂ ಸೇವಾ ಸಂಘಟನೆಗಳ ಮಾದರಿಯಲ್ಲಿ ಅನುಷ್ಠಾನಕ್ಕೆ ತರುವುದು. ಕೃಷಿ ಉತ್ಪನ್ನಗಳ ಖರೀದಿ, ಸಂಸ್ಕರಣೆ ಮತ್ತು ಮಾರಾಟ, ನಿವೇಶನ, ಪ್ಲಾಟ್‌ಗಳ ಖರೀದಿ ಹಾಗೂ ಮಾರಾಟ, ಮಾಹಿತಿ ಮತ್ತು ಮಾಧ್ಯಮ ಕ್ಷೇತ್ರಗಳ ಯೋಜನೆಗಳನ್ನು ಹಮ್ಮಿಕೊಳ್ಳುವುದು ಮೊದಲಾದ ವಿಶೇಷ ಉದ್ದೇಶಗಳನ್ನು ನಮ್ಮ ಸಂಸ್ಥೆ ಹೊಂದಿರುತ್ತದೆ..